ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ವಿವಿ ಕ್ಯಾಂಪಸ್ ಮಹಿಳಾ ವಾಶ್ ರೂಂಗೆ ಅಪರಿಚಿತ ಪುರುಷರ ಎಂಟ್ರಿ: ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಮಾಡಿದ್ದೇನು…?

On: February 17, 2025 2:20 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:17-02-2025

ಹೈದರಾಬಾದ್: ಆಂಧ್ರಪ್ರದೇಶ ವಿಶ್ವವಿದ್ಯಾನಿಲಯದಲ್ಲಿ ಪುರುಷರು ಮಹಿಳೆಯರ ಶೌಚಾಲಯಕ್ಕೆ ಪ್ರವೇಶಿಸಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಆಂಧ್ರಪ್ರದೇಶದ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ವಾಶ್ ರೂಂಗೆ ಅಪರಿಚಿತ ವ್ಯಕ್ತಿಗಳು ನುಗ್ಗಿ ಆತಂಕ ಸೃಷ್ಟಿಸಿದ್ದಾರೆ. ಪೊಲೀಸರು ಮತ್ತು ವಿಶ್ವವಿದ್ಯಾನಿಲಯದ ಅಧಿಕಾರಿಗಳು ಬಿಗಿ ಕ್ರಮಕ್ಕೆ ಮುಂದಾಗದ ಕಾರಣ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ತಡರಾತ್ರಿ ಪ್ರತಿಭಟನೆ ನಡೆಸಿದರು, ಅಪರಿಚಿತ ಪುರುಷರು ಕ್ಯಾಂಪಸ್‌ನಲ್ಲಿರುವ ಮಹಿಳಾ ವಾಶ್‌ರೂಮ್‌ಗೆ ಪ್ರವೇಶಿಸಿದ್ದಾರೆ ಎಂದು ಆರೋಪಿಸಿ ಸುರಕ್ಷತೆಯ ಕಾಳಜಿ ಬಗ್ಗೆ ಪ್ರಶ್ನಿಸಿದರು.

ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳು ವಾಶ್‌ರೂಮ್‌ನೊಳಗೆ ಪುರುಷರನ್ನು ಕಂಡು ಭಯಭೀತರಾಗಿದ್ದರು. ಅವರು ತಕ್ಷಣ ಪೊಲೀಸರು ಮತ್ತು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ತಿಳಿಸಿದರೂ ಕೂಡಲೇ ಧಾವಿಸಿಲ್ಲ. ಇದು ವಿದ್ಯಾರ್ಥಿನಿಯರನ್ನು ಮತ್ತಷ್ಟು ಕೆರಳಿಸಿತು.

ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸುರಕ್ಷತೆ ಒದಗಿಸಬೇಕು ಎಂದು ಆಗ್ರಹಿಸಿ, ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಹೊರಗೆ ರಸ್ತೆ ತಡೆದು ಸಿಟ್ಟು ಹೊರಹಾಕಿದರು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದರು.

“ನಾವು ಇನ್ನು ಮುಂದೆ ಕ್ಯಾಂಪಸ್‌ನಲ್ಲಿ ಸುರಕ್ಷಿತವಾಗಿಲ್ಲ. ಅಧಿಕಾರಿಗಳು ಈಗಲಾದರೂ ಕ್ರಮಕೈಗೊಳ್ಳದಿದ್ದರೆ ಪ್ರತಿಭಟನೆ ಮುಂದುವರಿಸುತ್ತೇವೆ’ ಎಂದು ವಿದ್ಯಾರ್ಥಿಯೊಬ್ಬರು ತಿಳಿಸಿದರು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಭದ್ರತಾ ಗಸ್ತು ಹೆಚ್ಚಿಸಬೇಕು, ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಮತ್ತು ಕ್ಯಾಂಪಸ್ ಲೈಟಿಂಗ್ ಅನ್ನು ಸುಧಾರಿಸಬೇಕು ಎಂದು ಅವರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ವಿಶ್ವವಿದ್ಯಾನಿಲಯ ಆಡಳಿತವು ವಿದ್ಯಾರ್ಥಿಗಳಿಗೆ ತಕ್ಷಣದ ಕ್ರಮದ ಭರವಸೆ ನೀಡಿದೆ, ಆದರೆ ಪ್ರತಿಭಟನಾಕಾರರು ಕಾಂಕ್ರೀಟ್ ಕ್ರಮಗಳನ್ನು ಜಾರಿಗೆ ತರುವವರೆಗೆ ಅವರು ಹಿಂದೆ ಸರಿಯುವುದಿಲ್ಲ ಎಂದು ಒತ್ತಾಯಿಸಿದರು. ಈ ಘಟನೆಯು ಡಿಸೆಂಬರ್ 23, 2024 ರಂದು ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಮಾಸುವ ಮುನ್ನವೇ ಬಂದಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment