Site icon Kannada News-suddikshana

ಪ್ರಗತಿ ಮೊಬೈಲ್ ಅಪ್ಲಿಕೇಶನ್ ಏನಿದು…? ಸ್ಪೆಷಾಲಿಟಿ ಏನು…? ಹೇಗೆ ಕಾರ್ಯನಿರ್ವಹಿಸುತ್ತದೆ…?

SUDDIKSHANA KANNADA NEWS/ DAVANAGERE/ DATE:31-01-2024

ಬೆಂಗಳೂರು: జిಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ ಪ್ರಗತಿ ಮೊಬೈಲ್ ಅಪ್ಲಿಕೇಶನ್ ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು.

ಪ್ರಗತಿ ಮೊಬೈಲ್ ಅಪ್ಲಿಕೇಶನ್ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಸಹಾಯ ಮಾಡುತ್ತದೆ ಮತ್ತು ಅಧಿಕಾರಿಗಳು ವೇಳಾಪಟ್ಟಿಯ ಪ್ರಕಾರ ಸಂಸ್ಥೆಗಳಿಗೆ ಭೇಟಿ ನೀಡುವುದರಿಂದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಅಪ್ಲಿಕೇಶನ್ ಅಗತ್ಯತೆಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಹಾಗೂ ಸರಿಯಾದ ಯೋಜನೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಮತ್ತು ನಿಧಿಯ ಪರಿಣಾಮಕಾರಿ ಬಳಕೆಗೆ ಸಹಾಯ ಮಾಡುತ್ತದೆ.

ಮೊಬೈಲ್ ಅಪ್ಲಿಕೇಶನ್ ತಂತ್ರಾಂಶಕ್ಕೆ ಚಾಲನೆ ನೀಡುವ ವೇಳೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪಯ ಮುಖ್ಯ ಕಾರ್ಯದರ್ಶಿ ಅತೀಕ್ ಅಹಮದ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರ ಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿರುತ್ತದೆ.

ವಿಶೇಷ ಯೋಜನೆಗಳ ಅಡಿಯಲ್ಲಿ ಅನೇಕ ಸಲಕರಣೆಗಳು ಮತ್ತು ಇತರ ಸೌಲಭ್ಯಗಳನ್ನು ಜಿಲ್ಲಾಡಳಿತವು ಒದಗಿಸಿದೆ. ಈ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಬಳಕೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಕ್ಷೇತ್ರಮಟ್ಟದ ವಿಶ್ಲೇಷಣೆಗಳ ಅಗತ್ಯವಿದೆ. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮ್ಮಕ್ಷೇತ್ರಮಟ್ಟದಲ್ಲಿ ಭೇಟಿ ನೀಡುವ ಮಾಹಿತಿಯನ್ನು ಸಂಗ್ರಹಿಸಲು ತಂತ್ರಾಂಶದಲ್ಲಿ ಸರಳ ವಿಧಾನವನ್ನು ಅನುಸರಿಸಲಾಗಿದೆ.

ಎಲ್ಲಾಇಲಾಖೆಗಳ ಪರಿಣಾಮಕಾರಿ ಮೇಲ್ವಿಚಾರಣೆ ಮತ್ತು ತಪಾಸಣೆಗಳನ್ನು ಸುವ್ಯವಸ್ಥಿತಗೊಳಿಸಲು, ತಂತ್ರಾಂಶ ಹಸ್ತಕ್ಷೇಪದ ಅಗತ್ಯವನ್ನುಅನುಷ್ಠಾನ ಮಾಡುವುದೇ ಪ್ರಗತಿ ಮೊಬೈಲ್ ಅಪ್ಲಿಕೇಶನ್.

ಪ್ರಗತಿ ಅಪ್ಲಿಕೇಶನ್‌ ಅಭಿವೃದ್ಧಿ

1. ಅಧಿಕಾರಿಗಳಿಂದ ಕ್ಷೇತ್ರ ಭೇಟಿಗಳು ಕಡಿಮೆಯಾಗಿರುವುದು

2. ಹಿರಿಯ ಅಧಿಕಾರಿಗಳು ನಿಯೋಜಿಸಿದ ಕ್ಷೇತ್ರ ಭೇಟಿಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ತೊಂದರೆ.

3. ಅಂತರ ಇಲಾಖಾ ಕ್ಷೇತ್ರ ಭೇಟಿಗಳನ್ನು ನಿರ್ವಹಿಸುವಲ್ಲಿ ಮತ್ತು ಮೇಲ್ವಿಚಾರಣೆ ಮಾಡುವಲ್ಲಿ ತೊಂದರೆ.

4. ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಮತ್ತುಕ್ರೋಢೀಕರಿಸುವಲ್ಲಿ ಸಮಸ್ಯೆ.

ತಂತ್ರಾಂಶದ ವೈಶಿಷ್ಟ್ಯಗಳು

ತಂತ್ರಾಂಶದ ಬಳಕೆಯ ಪರಿಣಾಮ:

Exit mobile version