SUDDIKSHANA KANNADA NEWS/DAVANAGERE/DATE:30-04-2024
ಗುವಾಹಟಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣರ ರಾಸಲೀಲೆ ಪ್ರಕರಣದ ಪೆನ್ ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಠಿಣ ನಿಲುವು ತಳೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರಿ ಶಕ್ತಿ ಪರ. ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಅಪಮಾನ ಆದರೆ ಸಹಿಸಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಠೋರ ಮಾತುಗಳಲ್ಲಿ ಹೇಳಿದ್ದಾರೆ.
ಗುವಾಹಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಆಘಾತಕಾರಿಯಾದದ್ದು. ನಾರಿ ಶಕ್ತಿ ಪರ ಬಿಜೆಪಿ ನಿಲ್ಲುತ್ತದೆ. ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಕಠಿಣ ನಿಲುವು ಜೆಡಿಎಸ್ ತಳೆಯಲಿದೆ. ನನ್ನ ಮಿತ್ರ ಪಕ್ಷ ಜೆಡಿಎಸ್ ಸಹ ತನಿಖೆಯ ಪರ ಇದೆ, ನಾವು ತನಿಖೆಯ ಪರ ಇದ್ದೇವೆ ಎಂದರು.
ಪ್ರಜ್ವಲ್ ರೇವಣ್ಣ ವಿಚಾರ ಮಾಧ್ಯಮದದಲ್ಲಿ ಗಮನಿಸಿದ್ದೇನ. ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವೇ ಇಲ್ಲ. ಬಿಜೆಪಿ ನಿಲುವು ಸ್ಪಷ್ಟ. ಮಹಿಳೆಯರ ಮೇಲಿನ ದೌರ್ಜನ್ಯ ಸಹಿಸಲ್ಲ. ಕಾಂಗ್ರೆಸ್ ವಿನಾಕಾರಣ ನಮ್ಮ ಮೇಲೆ ಆರೋಪ ಮಾಡುತ್ತಿದೆ. ಕರ್ನಾಟಕದಲ್ಲಿ ಅಧಿಕಾರದಲ್ಲಿ ಇರುವುದು ಕಾಂಗ್ರೆಸ್ ಸರ್ಕಾರ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಬಿಜೆಪಿಯನ್ನು ಪ್ರಶ್ನೆ ಮಾಡುತ್ತಾರೆ. ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಅವರಿಗೆ ಕೇಳಿ. ಇಲ್ಲಿಯವರೆಗೆ ಯಾಕೆ ಸೂಕ್ತ ತನಿಖೆ ಮಾಡಿಲ್ಲ ಎಂಬುದಾಗಿ ಕೇಳಲಿ ಎಂದು ತಿರುಗೇಟು ನೀಡಿದರು.
ಕಾನೂನು ಸುವ್ಯವಸ್ಥೆ ಕಾಾಡುವುದು ರಾಜ್ಯ ಸರ್ಕಾರದ ಕರ್ತವ್ಯ. ನಾನು ಪ್ರಿಯಾಂಕಾ ಗಾಂಧಿಗೆ ಕೇಳುತ್ತೇನೆ. ನೀವೇ ನಿಮ್ಮ ಪಕ್ಷ ಅಧಿಕಾರದಲ್ಲಿದ್ದು, ಸಿಎಂ, ಡಿಸಿಎಂಗೆ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ. ನಾವು ಸಂತ್ರಸ್ತ ಮಹಿಳೆಯರ ಪರ, ನ್ಯಾಯದ ಪರ ಇದ್ದೇವೆ ಎಂದರು.