SUDDIKSHANA KANNADA NEWS/ DAVANAGERE/ DATE:25-10-2024
ದಾವಣಗೆರೆ: ಸಾಮಾನ್ಯವಾಗಿ ಸಾಕಿದ ನಾಯಿಗಳು ಕಚ್ಚಿದರೆ, ಉಗುರಿನಿಂದ ಪರಚಿದರೆ ಅಥವಾ ನಮ್ಮ ಮೈ ಮೇಲಿರುವ ಈಗಾಗಲೆ ಇರುವ ಗಾಯವನ್ಮು ನಾಲಿಗೆಯಿಂದ ನೆಕ್ಕಿದರೆ ಏನೂ ಆಗುವುದಿಲ್ಲವೆಂದು
ನಿರ್ಲಕ್ಷ್ಯ ವಹಿಸಬೇಡಿ.
ಸೋಪು ಮತ್ತು ನೀರಿನಿಂದ ತೊಳೆದು ಹತ್ತಿರದ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆಯಂತೆ ರೇಬಿಸ್ ನಿರೋಧಕ ಚುಚ್ಚುಮದ್ದು ಪಡೆಯಬೇಕು. ಇದು ಜಿಲ್ಲಾ ಸರ್ವೇಕ್ಷಣಧಿಕಾರಿ ಹಾಗೂ ರಾಷ್ಟ್ರೀಯ ರೇಬಿಸ್ ನಿಯಂತ್ರಣ
ಕಾರ್ಯಕ್ರಮ ನೋಡಲ್ ಅಧಿಕಾರಿಗಳು ನೀಡುವ ಸಲಹೆ.
ದಾವಣಗೆರೆ ನಗರ ಹಾಗೂ ಬಳ್ಳಾರಿ ನಗರದ ಮುಂಡ್ರಿಗಿ ಬಡಾವಣೆಯಲ್ಲಿ ನಾಯಿ ಕಡಿತ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕೆಲಸ ಈಗಾಗಲೇ ಮಾಡಲಾಗಿದೆ.
ಸೋಂಕುವುಳ್ಳ ನಾಯಿ ಕಡಿತದಿಂದ ಮಾರಣಾಂತಿಕ ರೇಬೀಸ್ ಕಾಯಿಲೆಯನ್ನು ಹರಡುವುದನ್ನು ತಡೆಗಟ್ಟಬಹುದಾಗಿದ್ದು, ವೈದ್ಯರ ಸಲಹೆಯಂತೆ ರೇಬಿಸ್ ಚುಚ್ಚುಮದ್ದನ್ನು ಮೊದಲ ದಿನ, 3ನೇ ದಿನ, 7ನೇ ದಿನ, 14ನೇ ದಿನ, 28 ದಿನ ತಪ್ಪದೇ ಲಸಿಕೆ ಪಡೆಯಬೇಕು.