ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧಿಸಿದರೆ ತಪ್ಪೇನು: ಸೈಯದ್ ಖಾಲಿದ್ ಅಹ್ಮದ್ ಪ್ರಶ್ನೆ

On: October 14, 2025 5:51 PM
Follow Us:
ಸರ್ಕಾರಿ
---Advertisement---

SUDDIKSHANA KANNADA NEWS/DAVANAGERE/DATE:14_10_2025

ದಾವಣಗೆರೆ: ಸಾರ್ವಜನಿಕ ಸ್ಥಳ, ದೇವಸ್ಥಾನ ಸೇರಿದಂತೆ ಸರ್ಕಾರಿ ಜಾಗದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧಿಸಬೇಕೆಂದು ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದು ಸ್ವಾಗತಾರ್ಹ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದಾರೆ.

READ ALSO THIS STORY: ಭರ್ಜರಿ ಉದ್ಯೋಗಾವಕಾಶ: SSC CPO ಸಬ್-ಇನ್ಸ್‌ಪೆಕ್ಟರ್ 2861 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಖಾಸಗಿ ಸ್ಥಳಗಳಲ್ಲಿ ಬೈಠಕ್ ಸೇರಿದಂತೆ ಕಾರ್ಯಕ್ರಮ ನಡೆಸಲು ಸರ್ಕಾರ ನಿರ್ಬಂಧ ಹೇರಿಲ್ಲ. ಸರ್ಕಾರಿ ಸ್ಥಳಗಳಲ್ಲಿ ಮಾತ್ರ ಅನುಮತಿ ಬೇಡ ಎಂದಿದ್ದಾರೆ. ಸಿದ್ದರಾಮಯ್ಯ ಅವರೂ ಸಹ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಅವರು ಒತ್ತಾಯಿಸಿ ಪತ್ರ ಬರೆದಿಲ್ಲ. ಆದ್ರೆ, ಬಿಜೆಪಿ ನಾಯಕರು ಜನರಲ್ಲಿ ತಪ್ಪು ಸಂದೇಶ ನೀಡುತ್ತಿದ್ದಾರೆ. ಆರ್ ಎಸ್ ಎಸ್ ಅನ್ನೇ ಸಂಪೂರ್ಣ ನಿಷೇಧ ಮಾಡುವ ಕುರಿತಂತೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಜನಸಾಮಾನ್ಯರಲ್ಲಿ ಗೊಂದಲ ಸೃಷ್ಟಿಸುವುದನ್ನು ಮೊದಲಿನಿಂದಲೂ ಬಿಜೆಪಿ ಮಾಡಿಕೊಂಡೇ ಬರುತ್ತಿದೆ. ಸತ್ಯವನ್ನು ಜನರ ಮುಂದೆ ಹೇಳಲಿ. ಅದನ್ನು ಬಿಟ್ಟು ಸುಳ್ಳು ಹೇಳುತ್ತಲೇ ಗೊಂದಲ ಸೃಷ್ಟಿಸುವುದನ್ನು ಮುಂದಾದರೂ ನಿಲ್ಲಿಸಲಿ ಎಂದು ಸಲಹೆ ನೀಡಿದ್ದಾರೆ.

ಕಳೆದ ಲೋಕಸಭೆ ಚುನಾವಣೆ ವೇಳೆ ಆಗಿರುವ ಮತಗಳ್ಳತನ ಬಗ್ಗೆ ಮಾತನಾಡದ ಬಿಜೆಪಿಯವರು ಸಣ್ಮ ಪುಟ್ಟ ವಿಚಾರವನ್ನು ದೊಡ್ಡದಾಗಿ ಮಾಡುತ್ತಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ವೋಟ್ ಚೋರಿ ಆಗಿರುವುದಕ್ಕೆ ದಾಖಲೆಗಳೇ ಸಿಕ್ಕಿವೆ. ಈ ಬಗ್ಗೆ ಹೋರಾಟ ನಡೆಸುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾರದರ್ಶಕ ಚುನಾವಣೆ ನಡೆಯುವಂತಾಗಬೇಕು. ಆದರೆ ಮೋಸದಿಂದ ಗೆದ್ದು ಅಧಿಕಾರ ಹಿಡಿದು ಈಗ ಆರ್ ಎಸ್ ಎಸ್ ವಿಚಾರಕ್ಕೆ ಸಂಬಂಧಿಸಿದಂತೆ ಸುಳ್ಳು ಹೇಳಿ ಕಾಂಗ್ರೆಸ್ ವಿರುದ್ಧ ಜನರು ಆಕ್ರೋಶಗೊಳ್ಳುವಂತೆ ಪ್ರೇರೇಪಿಸುತ್ತಿದ್ದಾರೆ. ಇಂಥ ನಾಟಕ ಹೆಚ್ಚು ದಿನ ನಡೆಯುವುದಿಲ್ಲ ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

ತ್ಯಾಜ್ಯ

ನರಕ ಚರ್ತುದರ್ಶಿಯಂದು ಕಸ ಹೊರಗೆ ಎಸೆಯಬೇಡಿ, ಪ್ರತ್ಯೇಕವಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಿ

Leave a Comment