SUDDIKSHANA KANNADA NEWS/ DAVANAGERE/ DATE:17-02-2025
ಬೆಂಗಳೂರು: ಸ್ಯಾಂಡಲ್ ವುಡ್ ನಟ ರಾಕ್ಷಸ, ನಾಯಕ ನಟ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ಮದುವೆ ಅದ್ಧೂರಿಯಾಗಿ ಮೈ,ಸೂರಿನಲ್ಲಿ ನಡೆಯಿತು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ರಾಜ್ಯಪಾಲರಾದ ಗೆಹ್ಲೋಟ್ ಸೇರಿದಂತೆ ಘಟಾನುಘಟಿಗಳು ಆಗಮಿಸಿ ಆಶೀರ್ವದಿಸಿದರು. ಇದಕ್ಕಿಂತ ಮುಖ್ಯವಾಗಿ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ಅಭಿಮಾನಿಗಳ ಮುಂದೆ ಮಂಡಿಯೂರಿ ಕೃತಜ್ಞತೆ ಸಲ್ಲಿಸಿದ್ದು ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಬಗ್ಗೆ ಭಾವನಾತ್ಮಕ ಪೋಸ್ಟ್ ಮಾಡಿರುವ ಡಾಲಿ ಧನಂಜಯ್ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ಎಲ್ಲರಿಗೂ ನಮಸ್ಕಾರ,
ಮದುವೆಗೆ ಬಂದು ಹರಸಿದ, ಬರಲಾಗದೆ ಇದ್ದರು ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃದಯಪೂರ್ವಕ ನಮನಗಳು.
ಯಾವುದೇ ತೊಂದರೆ ಆಗದೆ ಸಮಾರಂಭ ಚೆನ್ನಾಗಿ ಆಗುವಲ್ಲಿ ಕುಟುಂಬದ ಜೊತೆ ಸ್ನೇಹಿತರು, ನೆಂಟರು, ಇಷ್ಟರು, ಮಾಧ್ಯಮ, ಪೊಲೀಸ್ ಇಲಾಖೆ, ಕಾರ್ಮಿಕರು, ಅಭಿಮಾನಿಗಳಾದಿಯಾಗಿ ಸಾಕಷ್ಟು ಜನರ ಶ್ರಮವಿದೆ. ಎಲ್ಲರಿಗೂ ತುಂಬು ಅಭಿಮಾನದ ಕೃತಜ್ಞತೆಗಳು.
ತುಂಬ ಜನ ಸೇರಿದ್ದರಿಂದ, ಕೆಲವರಿಗೆ ನಮ್ಮನ್ನು ತಲುಪಲು ತೊಂದರೆಯುಂಟಾಗಿದ್ದಲ್ಲಿ, ತಲುಪಲು ಸಾಧ್ಯವಾಗಿರದಿದ್ದಲ್ಲಿ ದಯವಿಟ್ಟು ಕ್ಷಮೆಯಿರಲಿ, ಖಂಡಿತವಾಗಿಯೂ ಇನ್ನಷ್ಟು ಒಳ್ಳೆ ವಿಷಯಗಳೊಂದಿಗೆ ಮತ್ತೆ ಸಿಗುತ್ತೇವೆ. ಆಶೀರ್ವಾದವಿರಲಿ.
ಇಷ್ಟೆಲ್ಲದರ ಮಧ್ಯೆ ಬಂದು ಹರಸಿದ ನನ್ನ ಚಿತ್ರರಂಗದ ಗೆಳೆಯರು , ತಾರೆಯರು, ಕಾರ್ಮಿಕರು, ಹಾಗೂ ನಮಗಾಗಿ ಕೆಲಸಕ್ಕೆ ನಿಂತ ಪ್ರೊಡಕ್ಷನ್ ಮ್ಯಾನೇಜರ್ಸ್ ತಂಡಕ್ಕೆ, ಒಟ್ಟಾಗಿ ನನ್ನ ಚಿತ್ರರಂಗದ ಕುಟುಂಬಕ್ಕೆ ಹೃಯಪೂರ್ವಕ ನಮನಗಳು.
ಮದುವೆಯ ಮೆರಗು ಹೆಚ್ಚಿಸಿದ ಪ್ರೀತಿಯ ಅಭಿಮಾನಿಗಳಿಗೆ special thanks.ತಾಯಿ ಚಾಮುಂಡೇಶ್ವರಿಗೆ ಭಕ್ತಿಪೂರ್ವಕ ನಮನಗಳು ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.