SUDDIKSHANA KANNADA NEWS/ DAVANAGERE/ DATE:09-04-2025
ಬೆಂಗಳೂರು: 19 ವರ್ಷದ ಯುವತಿಯನ್ನು 7 ದಿನಗಳ ಕಾಲ 23 ಪಾಪಿಗಳು ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ.ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಯುವತಿಯರಿಗೆ, ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಉತ್ತರ ಪ್ರದೇಶದಲ್ಲಿ ಇಂತಹ ಭೀಭತ್ಸ ಘಟನೆಗಳು ಸಾಮನ್ಯದಂತಾಗಿದ್ದು, “ಗೋದಿ ಮಾಧ್ಯಮಗಳು” ಮೌನವಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ. ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರು ಮಾಡಿರುವ ಅವರು, ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಸುಪ್ರೀಂ ಕೋರ್ಟ್ ಎರಡು ದಿನಗಳ ಹಿಂದೆ ನ್ಯಾಯಾಧೀಶರಾದ ಸಂಜೀವ್ ಖನ್ನಾ ಅವರ ನೇತೃತ್ವದ ತ್ರಿಸದಸ್ಯ ಪೀಠ ಛೀಮಾರಿ ಹಾಕಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದಲ್ಲೇ ದುಷ್ಕೃತ್ಯ ನಡೆದಿದ್ದರೂ ಪ್ರಧಾನಿ ಮೌನವಹಿಸಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತಿದೆ. ಕೂಡಲೇ ಸರ್ಕಾರ ಸಂತ್ರಸ್ಥೆಯ ನೆರವಿಗೆ ಧಾವಿಸಿ, ಅತ್ಯಾಚಾರ ಎಸೆಗಿರುವ ದುಷ್ಕರ್ಮಿಗಳಿಗೆ ಶಿಕ್ಷೆಗೊಳಪಡಿಸಲು ಒತ್ತಾಯಿಸುತ್ತೇನೆ ಎಂದು ಹರಿಪ್ರಸಾದ್ ಹೇಳಿದ್ದಾರೆ.