SUDDIKSHANA KANNADA NEWS/ DAVANAGERE/DATE:01_09_2025
ದಾವಣಗೆರೆ: ಪತಿಯ ಅನೈತಿಕ ಸಂಬಂಧ ವಿಚಾರ ಪದೇ ಪದೇ ಮನೆಯಲ್ಲಿ ಗಲಾಟೆಗೆ ಕಾರಣವಾಗಿದ್ದು, ಕುಪಿತಗೊಂಡ ಪತಿಯು ಪತ್ನಿಯ ಕತ್ತು ಸೀಳಿ ಹತ್ಯೆಗೈದ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.
READ ALSO THIS STORY: ಮಸೀದಿ ಪಕ್ಕದಲ್ಲೇ ಗಣಪತಿ ಇಟ್ಟು ಕೇಕೆ ಹೊಡೆಯಬೇಕಾ, ತಣ್ಣಗಿರದಿದ್ರೆ ಒಳಗೆ ಹಾಕಿಸ್ತೇನೆ: ಎಸ್. ಎಸ್. ಮಲ್ಲಿಕಾರ್ಜುನ್ ಗರಂ!
ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಜ್ಯೋತಿ (35) ಕತ್ತು ಕೊಯ್ದ ರೀತಿಯಲ್ಲಿ ಶವವಾಗಿ ಪತ್ತೆಯಾದ ಮಹಿಳೆ. ಗಂಡನಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪತಿ ಬಾಲರಾಜನನ್ನ ವಶಕ್ಕೆ ಪಡೆದು ಜಗಳೂರು ಪೊಲೀಸರು ವಿಚಾರಣೆ ನಡೆಸತ್ತಿದ್ದಾರೆ. ಪತಿ ಬಾಲರಾಜ ಬೇರೆ ಮಹಿಳೆಯರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ವಿಚಾರ ಕುರಿತಂತೆ ಪತಿ ಮತ್ತು ಪತ್ನಿ ನಡುವೆ ಗಲಾಟೆ ನಡೆಯುತ್ತಲೇ ಇತ್ತು.
ಪದೇ ಪದೇ ಪ್ರಶ್ನೆ ಮಾಡುತ್ತಿದ್ದ ಜ್ಯೋತಿಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿರುವ ಜಗಳೂರು ಪೊಲೀಸರು, ತನಿಖೆ ಮುಂದುವರಿಸಿದ್ದಾರೆ. ಸ್ಥಳಕ್ಕೆ ಡಾಗ್ ಸ್ಕ್ವಾಡ್ ಹಾಗೂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.