ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕೋವಿಡ್-19 ಮತ್ತೆ ಜಗತ್ತು ತಲ್ಲಣಗೊಳಿಸುತ್ತಾ?

On: May 16, 2025 11:08 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-16-05-2025

ಕೊರೊನಾ ವೈರಸ್. ಹೆಸರು ಕೇಳುತ್ತಿದ್ದಂತೆ ಪ್ರತಿಯೊಬ್ಬರಲ್ಲೂ ಭಯ ಶುರುವಾಗುತ್ತದೆ. ಇಡೀ ವಿಶ್ವವನ್ನೇ ಕಾಡಿಸಿದ್ದ ಮಹಾಮಾರಿ ಮತ್ತೆ ವಕ್ಕರಿಸುತ್ತಾ ಎಂಬ ಆತಂಕ ಶುರುವಾಗಿದೆ. ಇದಕ್ಕೆ ಕಾರಣವೂ ಇದೆ.

ಏಷ್ಯಾದ ಕೆಲವು ಭಾಗಗಳಲ್ಲಿ ಕೊರೊನಾ ವೈರಸ್ ಅತ್ಯಂತ ವೇಗವಾಗಿ ಹರಡಲು ಶುರು ಮಾಡಿದ್ದು, ದಿನ ಕಳೆದಂತೆ ಪ್ರಕರಣಗಳ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ಹಾಂಗ್ ಕಾಂಗ್ ಮತ್ತು ಸಿಂಗಾಪುರದಂತಹ ಹಣಕಾಸು ಪ್ರಮುಖ ದೇಶಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಇದರಿಂದ ಎಚ್ಚೆತ್ತಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಇದು ಹೊಸ ಅಲೆ ಎಂದು ಖಚಿತಪಡಿಸಿದ್ದಾರೆ.

ಹಾಂಗ್ ಕಾಂಗ್‌ನಲ್ಲಿ ಕೋವಿಡ್ ಪ್ರಕರಣಗಳು ವರ್ಷದಲ್ಲೇ ಗರಿಷ್ಠ ಮಟ್ಟವನ್ನು ತಲುಪಿರುವುದರಿಂದ ಪರಿಸ್ಥಿತಿ ಚಿಂತಾಜನಕವಾಗಿದೆ. ಕಳೆದ ವರ್ಷದಿಂದ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಶೇಕಡಾವಾರು ಪ್ರಮಾಣ ಹೆಚ್ಚಾಗಿದೆ ಎಂದು ನಗರದ ಆರೋಗ್ಯ ರಕ್ಷಣೆ ಮತ್ತು ಸಾಂಕ್ರಾಮಿಕ ರೋಗಗಳ ಕೇಂದ್ರದ ಮುಖ್ಯಸ್ಥ ಆಲ್ಬರ್ಟ್ ಔ ಹೇಳಿದ್ದಾರೆ. ಪ್ರಸ್ತುತ ವೈರಸ್ ಹರಡುವಿಕೆ ತುಂಬಾ ಹೆಚ್ಚಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮೇ 3 ರ ಹೊತ್ತಿಗೆ ಗಂಭೀರ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆ 31 ಕ್ಕೆ ತಲುಪಿದೆ. ಇದು ಸುಮಾರು ಒಂದು ವರ್ಷದಲ್ಲೇ ಅತಿ ಹೆಚ್ಚು. 7 ಮಿಲಿಯನ್ ಜನರಿರುವ ನಗರದಲ್ಲಿ ವೈರಸ್ ಸ್ಥಿರವಾಗಿ ಹರಡುತ್ತಿದೆ ಎಂದು ತಿಳಿಸಿದೆ. ಸೋಂಕಿನ ಲಕ್ಷಣ ಕಂಡು ಬಂದರೆ ಕೂಡಲೆ ಆಸ್ಪತ್ರೆ ಭೇಟಿ ನೀಡಿ ಚಿಕಿತ್ಸೆ ಪಡೆಯುವಂತೆ ಸೂಚನೆ ನೀಡಿದ್ದಾರೆ.

ಸಿಂಗಾಪುರದಲ್ಲೂ ಪ್ರಕರಣಗಳು ಹೆಚ್ಚುತ್ತಿವೆ. ಮೇ 3ರ ವೇಳಗೆ ಅಂದಾಜು ವಾರದ ಪ್ರಕರಣಗಳ ಸಂಖ್ಯೆ 28% ರಷ್ಟು ಏರಿಕೆಯಾಗಿ 14,200 ಸಕ್ರೀಯ ಪ್ರಕರಣಗಳು ಕಾಣಿಸಿಕೊಂಡಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಅದೇ ಸಮಯದಲ್ಲಿ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ 30% ರಷ್ಟು ಹೆಚ್ಚಾಗಿದೆ.

ಜನರಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ಈ ಹೆಚ್ಚಳವಾಗಿರಬಹುದು ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಪ್ರಸ್ತುತ ರೂಪಾಂತರಗಳು ಸಾಂಕ್ರಾಮಿಕ ರೋಗದ ಉತ್ತುಂಗದಲ್ಲಿರುವ ರೂಪಾಂತರಗಳಿಗಿಂತ ಹೆಚ್ಚು ಅಪಾಯಕಾರಿ ಅಥವಾ ವೇಗವಾಗಿ ಹರಡುತ್ತವೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಸಚಿವಾಲಯ ಹೇಳಿದೆ.

ಸಿಂಗಾಪುರವು ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚಾದಾಗ ಮಾತ್ರ ಅಂತಹ ಘೋಷಣೆಗಳನ್ನು ಮಾಡುತ್ತದೆ, ಇದು ಪ್ರಸ್ತುತ ಪರಿಸ್ಥಿತಿಯ ತೀವ್ರತೆಯನ್ನು ಸೂಚಿಸುತ್ತದೆ. ಈ ಪರಿಸ್ಥಿತಿ ಈ ಎರಡು ನಗರಗಳಿಗೆ ಮಾತ್ರ ಸೀಮಿತವಾಗಿಲ್ಲ. ಏಷ್ಯಾದ ಅನೇಕ ಭಾಗಗಳಲ್ಲಿ ಇದೇ ರೀತಿಯ ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ, ಮೇ 4 ರವರೆಗಿನ ಐದು ವಾರಗಳಲ್ಲಿ ದೇಶಾದ್ಯಂತದ ಆಸ್ಪತ್ರೆಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣವು ದ್ವಿಗುಣಗೊಂಡಿದೆ ಎಂದು ಚೀನೀ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರದ ಅಂಕಿಅಂಶಗಳು ತಿಳಿಸಿವೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment