Site icon Kannada News-suddikshana

ಆರೋಪ ಸಾಬೀತಾದರೆ ನಾನು ನಿವೃತ್ತಿ ಘೋಷಿಸ್ತೇನೆ, ಇಲ್ಲದಿದ್ರೆ ಕ್ಷಮೆ ಕೋರಿ ರಾಜಕೀಯ ನಿವೃತ್ತಿ ಘೋಷಿಸ್ತೀರಾ ಮೋದಿ: ಸಿಎಂ ಸಿದ್ದರಾಮಯ್ಯ ಪಂಥಾಹ್ವಾನ

SUDDIKSHANA KANNADA NEWS/ DAVANAGERE/ DATE:16-11-2024

ಸೊಲ್ಲಾಪುರ: ಮಹಾರಾಷ್ಟ್ರ ಬಿಜೆಪಿ ಮುಖಂಡರು ಮತ್ತು ಬಿಜೆಪಿಯ ಮಂತ್ರಿಗಳು ಕರ್ನಾಟಕಕ್ಕೆ ಬಂದು ಪರೀಕ್ಷಿಸಲಿ. ಸುಳ್ಳಾದ್ರೆ ನಾನು ರಾಜಕೀಯ ನಿವೃತ್ತಿ ತಗೊತೀನಿ. ನಿಜ ಆಗಿದ್ರೆ ನೀವು ಮಹಾರಾಷ್ಟ್ರ ಜನತೆಯ ಕ್ಷಮೆ ಕೋರಿ ರಾಜಕೀಯ ನಿವೃತ್ತಿ ಘೋಷಿಸ್ತೀರಾ? ಎಂದು ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೆ ಪಂಥಾಹ್ವಾನ ಕೊಟ್ಟಿದ್ದಾರೆ.

ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಬರ್ತಾರೆ ಹಸಿ ಹಸಿ ಸುಳ್ಳು ಹೇಳಿ ಹೋಗ್ತಾರೆ. ಅವರು ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ ಅಂತ ಸವಾಲು ಹಾಕಿದ್ದೀನಿ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಏಕೆ ನನ್ನ‌ ಸವಾಲು ಸ್ವೀಕರಿಸುತ್ತಿಲ್ಲ. ಏನು ಭಯ ಅವರಿಗೆ ಎಂದು ಪ್ರಶ್ನಿಸಿದ ಅವರು, ಮಹಾರಾಷ್ಟ್ರದ ನಾನಾ ಕಡೆ ಚುನಾವಣಾ ಪ್ರಚಾರ ಪೂರೈಸಿ, ಸೋಲಾಪುರಕ್ಕೆ ಬಂದಿದ್ದೇನೆ. ಈ ಬಾರಿ ನಮಗೆ ಜನರು ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

Exit mobile version