ವಿಶ್ವ ಪರಿಸರ ದಿನವನ್ನು ಪ್ರತಿ ವರ್ಷ ಜೂನ್ 5ರಂದು ಆಚರಿಸಲಾಗುತ್ತದೆ.
ವಿಶ್ವ ಪರಿಸರ ದಿನವು ಪರಿಸರದ ಅತಿದೊಡ್ಡ ಅಂತರರಾಷ್ಟ್ರೀಯ ದಿನವಾಗಿದೆ. ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (ಯುಎನ್ಇಪಿ) ನೇತೃತ್ವದಲ್ಲಿ 1973 ರಿಂದ ವಾರ್ಷಿಕವಾಗಿ ನಡೆಯುವ ಇದು ಪರಿಸರ ವ್ಯಾಪ್ತಿಯ ಅತಿದೊಡ್ಡ ಜಾಗತಿಕ ವೇದಿಕೆಯಾಗಿ ಬೆಳೆದಿದೆ. ಇದನ್ನು ವಿಶ್ವದಾದ್ಯಂತ ಲಕ್ಷಾಂತರ ಜನರು ಆಚರಿಸುತ್ತಾರೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನು ತಡೆಯಲು ಈ ದಿನ ಆಚರಿಸಲಾಗುತ್ತದೆ.