SUDDIKSHANA KANNADA NEWS/ DAVANAGERE/DATE:19_08_2025
ದಾವಣಗೆರೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಮಹತ್ವದ ಹೆಜ್ಜೆಯಿಟ್ಟು, ಗೋಲ್ಡನ್ ಬುಕ್ ವರ್ಲ್ಡ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದಿದೆ ಎಂದು ಗಣಿ ಮತ್ತು ಭೂ ವಿಜ್ಞಾನ
ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
READ ALSO THIS STORY: ಧರ್ಮಸ್ಥಳದಲ್ಲಿ ಎಲ್ಲವೂ ಗೊಂದಲಮಯ: ಸುಳ್ಳಿನ ಜಾಲದಿಂದ ದೇವಾಲಯದ ಪರಂಪರೆಗೆ ಧಕ್ಕೆ ತರುವ ಹುನ್ನಾರ!
ದಾವಣಗೆರೆ ಜಿಲ್ಲೆಯಲ್ಲಿ ಜೂನ್ 11, 2023 ರಿಂದ ಜುಲೈ 25-2025 ರವರೆಗೆ 9.85 ಕೋಟಿ ಸಂಖ್ಯೆಯ ಮಹಿಳಾ ಫಲಾನುಭವಿಗಳು ಸಂಚರಿಸಿದ್ದು, ರೂ. 286 ಕೋಟಿ ಮೊತ್ತವಾಗಿರುತ್ತದೆ. ಎಂದು ತಿಳಿಸಿದ ಸಚಿವರು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಉತ್ತಮ ಫಲಿತಾಂಶ ಬರಲು ಶ್ರಮಿಸಿದ ಎಲ್ಲಾ ಸರ್ಕಾರಿ ಸಾರಿಗೆ ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿಗಳಿಗೆ ಸಚಿವರು ಶುಭವನ್ನು ತಿಳಿಸುವುದರ ಮೂಲಕ ಸಂತಸವನ್ನು ವ್ಯಕ್ತಪಡಿಸಿದ್ದಾರೆ.