SUDDIKSHANA KANNADA NEWS/ DAVANAGERE/ DATE:12-02-2024
ದಾವಣಗೆರೆ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ಜಿಲ್ಲಾ ಸಮಿತಿಯ ಸಭೆಯು ಪಕ್ಷದ ಕಚೇರಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಮಜೀದ ತುಂಬೆ ರವರ ಉಪಸ್ಥಿತಿಯಲ್ಲಿ ನಡೆಯಿತು.
ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಜಬಿವುಲ್ಲಾ ರವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು. ವೈಯುಕ್ತಿಕ ಕಾರಣಗಳಿಂದಾಗಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದ ಜಿಲ್ಲಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸ್ಥಾನಕ್ಕೆ ಇಂದು ನಡೆದ ಆಂತರಿಕ ಚುನಾವಣೆಯಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ಯಾಹಿಯಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಮೋಹಸಿನ್ ಮತ್ತು ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ ಮೊಹಮ್ಮದ್ ಅಜರುದ್ದೀನ್ ಬಾತಿ ಅವರು ಆಯ್ಕೆಯಾಗಿದ್ದಾರೆ.
ಈ ಸಭೆಯಲ್ಲಿ ಉಪಾಧ್ಯಕ್ಷರಾದ ರಜ್ವಿ ರಿಯಾಜ್ ಅಹಮದ್, ಕೋಶಾಧಿಕಾರಿ ಎ. ಅರ್. ತಾಹಿರ್, ಜಿಲ್ಲಾ ಸಮಿತಿ ಸದಸ್ಯರಾದ ಫಯಾಜ್ ಅಹಮದ್, ಫರೀದ್ ಖಾನ್, ದಾದಾವಲಿ, ಮನ್ಸುರ್ ಅಲಿ ಮತ್ತು ಹರಿಹರ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳು, ಮತ್ತು ದಾವಣಗೆರೆ ನಗರ ಸಮಿತಿಯ ಪದಾಧಿಕಾರಿಗಳು ಹಾಗೂ ದಾವಣಗೆರೆ ಜಿಲ್ಲೆಯ ಎಲ್ಲಾ ಬ್ರಾಂಚಿನ ಪದಾಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು.