SUDDIKSHANA KANNADA NEWS/ DAVANAGERE/ DATE:24-10-2024
ಬೆಂಗಳೂರು: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಯಾರನ್ನು ಕಣಕ್ಕಿಳಿಸಬೇಕೆಂಬ ಚರ್ಚೆ ನಡುವೆಯೇ ಕಾಂಗ್ರೆಸ್ ಅಭ್ಯರ್ಥಿ ಅಚ್ಚರಿ ಅಭ್ಯರ್ಥಿ ಘೋಷಿಸಿದೆ.
ಶಾಸಕ ವಿನಯ್ ಕುಲಕರ್ಣಿ ಪುತ್ರಿ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ವದಂತಿ ಇತ್ತು. ಪಂಚಮಸಾಲಿ ಸಮಾಜದವರಿಗೆ ಟಿಕೆಟ್ ಸಿಗಬಹುದು ಎಂಬ ಚರ್ಚೆ ನಡೆದಿತ್ತು. ಆದ್ರೆ, ಅಂತಿಮವಾಗಿ ಕಾಂಗ್ರೆಸ್ ಅಭ್ಯ.ರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಗೆ ಟಿಕೆಟ್ ನೀಡಲಾಗಿದೆ.
ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಈ ವಿಚಾರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ
ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು.
ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಅಥವಾ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುತ್ತಾರೆಂಬುದು ನಮಗೆ ಮುಖ್ಯವಲ್ಲ. ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಅವರು ಚನಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು.