SUDDIKSHANA KANNADA NEWS/ DAVANAGERE/ DATE:08-02-2024
ದಾವಣಗೆರೆ: ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಅವರು ದೆಹಲಿಯಲ್ಲಿದ್ದಾರೆ. ದೂರವಾಣಿಯಲ್ಲಿ ಅವರ ಜೊತೆ ಮಾತನಾಡಿದ್ದೇನೆ. ನೀವು ಅಲ್ಲಿಗೆ ಹೋಗಿ ಮಾತನಾಡಿ ಎಂದ ಮೇಲೆ ಬಂದಿದ್ದೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದರು.
ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.
ಬಿಜೆಪಿ 28 ಕ್ಷೇತ್ರಗಳಲ್ಲಿಯೂ ಗೆಲ್ಲಬೇಕೆಂಬ ಸಂಕಲ್ಪ ಮಾಡಿದ್ದೇವೆ. ಸಿದ್ದೇಶ್ವರ ಅವರು ದಾವಣಗೆರೆ ಮಾತ್ರವಲ್ಲ ರಾಜ್ಯದ ಅಭಿವೃದ್ಧಿ ಶಕ್ತಿ ನೀಡಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಸಿದ್ದೇಶ್ವರ ಅವರನ್ನು ಗೌರವವದಿಂದ ಕಾಣುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.
ಸಿದ್ದೇಶ್ವರ ಅವರು ಇಲ್ಲಿಲ್ಲ ಎಂದು ತಪ್ಪು ಗ್ರಹಿಕೆ ಮಾಡಿಕೊಳ್ಳಬೇಡಿ. ನೀವೆಲ್ಲಾ ಒಟ್ಟಾಗಿ ಒಂದಾಗಿ ಲೋಕಸಭಾ ಸದಸ್ಯರನ್ನು ಆಯ್ಕೆಗೊಳಿಸಿ. ಒಟ್ಟಾಗಿ ಕೆಲಸ ಮಾಡಿ ಎಂದು ಕೈ ಜೋಡಿಸಿ ಮನವಿ ಮಾಡುತ್ತೇನೆ. ಕಾರ್ಯಕ್ರಮದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಸೇರಿರುವುದು ಖುಷಿ ತಂದಿದೆ ಎಂದರು.
ಈ ಮೂಲಕ ಸಿದ್ದೇಶ್ವರ ವಿರೋಧಿ ಬಣಕ್ಕೆ ಠಕ್ಕರ್ ನೀಡಿರುವ ಯಡಿಯೂರಪ್ಪ ಅವರು, ಮುಂಬರುವ ಲೋಕಸಭೆ ಚುನಾವಣೆಗೆ ಯಾರೇ ಸ್ಪರ್ಧಿಸಿದಲೂ ಗೆಲ್ಲಿಸಿ ಕಳುಹಿಸಿ. ಸಿದ್ದೇಶ್ವರ ಅವರ ಬಗ್ಗೆ ಗುಣಗಾನ ಮಾಡಿರುವುದರಿಂದ ಅವರಿಗೆ ಮತ್ತೊಮ್ಮೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.