SUDDIKSHANA KANNADA NEWS/ DAVANAGERE/ DATE:09-03-2025
ಬೆಂಗಳೂರು: ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರ ಆರತಕ್ಷತೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ, ಪುತ್ರರಾದ ಬಿ. ವೈ. ರಾಘವೇಂದ್ರ. ಬಿ. ವೈ. ವಿಜಯೇಂದ್ರ ಭಾಗಿಯಾದರು.
ನೂತನ ದಾಂಪತ್ಯಕ್ಕೆ ಅಡಿಯಿಟ್ಟ ಸಂದರ್ಭದ ಕಾರ್ಯಕ್ರಮದಲ್ಲಿ ಸಂಘಟನೆಯ ಹಿರಿಯ ಮಾರ್ಗದರ್ಶಕರೂ ಆದ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಜೊತೆಗೂಡಿ ನೂತನ ವಧು ವರರನ್ನು ಹಾರೈಸಲಾಯಿತು.
ಈ ಸಂದರ್ಭದಲ್ಲಿ ಬಿ. ಎಸ್. ಯಡಿಯೂರಪ್ಪ. ಸಂಸದ ಬಿ. ವೈ. ರಾಘವೇಂದ್ರ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.