Home ದಾವಣಗೆರೆ ರಾಮ ಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆ: ಎಸ್‌ಪಿ ವಿರುದ್ಧ ಯೋಗಿ ಆದಿತ್ಯನಾಥ್ ವಾಗ್ದಾಳಿ
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ರಾಮ ಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆ: ಎಸ್‌ಪಿ ವಿರುದ್ಧ ಯೋಗಿ ಆದಿತ್ಯನಾಥ್ ವಾಗ್ದಾಳಿ

Share
ಯೋಗಿ ಆದಿತ್ಯನಾಥ್
Share

ಲಕ್ನೋ: ರಾಮ ಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಟೀಕಾಪ್ರಹಾರ ನಡೆಸಿದ್ದಾರೆ. 

‘ಪಂಚಾಯತ್ ಆಜ್ ತಕ್’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಮಾಜವಾದಿ ಪಕ್ಷದ (SP) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹಿಂದೆ ಅಯೋಧ್ಯೆ ಚಳವಳಿಯ ಸಂದರ್ಭದಲ್ಲಿ ರಾಮಭಕ್ತರ ಮೇಲೆ ಗುಂಡು ಹಾರಿಸಲು ಆದೇಶ ನೀಡಿದ್ದವರೇ ಇಂದು ಧರ್ಮ ಮತ್ತು ನಂಬಿಕೆಯ ಬಗ್ಗೆ ಮಾತನಾಡುತ್ತಿರುವುದು ತೀರಾ ವ್ಯಂಗ್ಯವಾಗಿದೆ ಎಂದು ಅವರು ಟೀಕಿಸಿದ್ದಾರೆ.

ಸಮಾಜವಾದಿ ಪಕ್ಷವು ತನ್ನ ರಾಜಕೀಯ ಲಾಭಕ್ಕಾಗಿ ಧರ್ಮದ ನಿಲುವನ್ನು ಬದಲಾಯಿಸುತ್ತಿದೆ ಎಂದು ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles