ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬೆಂಗಳೂರಿನ ವಿಧಾನಸೌಧ ವೀಕ್ಷಣೆಗೂ ಕೊಡಬೇಕು ಹಣ! ಯಾಕೆ?

On: April 9, 2025 1:47 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:09-04-2025

ಬೆಂಗಳೂರಿನ ವಿಧಾನಸೌಧ ಜನಾಕರ್ಷಣೆ ಕೇಂದ್ರ. ಇಲ್ಲಿಗೆ ರಾಜ್ಯದ ಎಲ್ಲಾ ಮೂಲೆಗಳಿಂದಲೂ, ವಿದೇಶಗಳಿಂದಲೂ ವೀಕ್ಷಣೆಗೆ ಬರುತ್ತಾರೆ. ಆದ್ರೆ, ಇನ್ಮುಂದೆ ಫ್ರೀ ಆಗಿ ನೋಡಲು ಆಗದು. ಇದಕ್ಕೂ ಹಣ ನೀಡಬೇಕು.

ಬೆಲೆ ಏರಿಕೆ ಮಾಡಿ ಜನಾಕ್ರೋಶಕ್ಕೆ ಕಾರಣವಾಗಿರುವ ರಾಜ್ಯ ಸರ್ಕಾರವು ಈಗ ವಿಧಾನಸೌಧ ವೀಕ್ಷಣೆಗೂ ಶುಲ್ಕ ನಿಗದಿಪಡಿಸಿದೆ. ಕಾಂಗ್ರೆಸ್ ನೇತೃತ್ವದ ಸರ್ಕಾರದ ಆದೇಶಕ್ಕೆ ಭಾರೀ ವಿರೋಧವೂ ವ್ಯಕ್ತವಾಗುತ್ತಿದೆ.

ನಂದಿನಿ ಹಾಲು, ಮೊಸರು, ಮುದ್ರಾಂಕ ಶುಲ್ಕ, ಡೀಸೆಲ್, ವಿದ್ಯುತ್ ಹಾಗೂ ನೀರಿನ ದರ ಹೆಚ್ಚಿಸಿ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ದಿನ ಕಳೆದಂತೆ ಶುಲ್ಕಗಳ ಹೆಚ್ಚಳವಾಗುತ್ತಿದೆ. ರಾಜ್ಯ ಸರ್ಕಾರವು ಈ ರೀತಿಯ ನಿರ್ಧಾರ ತೆಗೆದುಕೊಳ್ಳುವುದಕ್ಕಿಂತ ಗ್ಯಾರಂಟಿ ಯೋಜನೆಗಳನ್ನೇ ಬಂದ್ ಮಾಡುವಂತೆ ಜನರು ಆಗ್ರಹಿಸುತ್ತಿದ್ದಾರೆ.

ಪ್ರವಾಸಿಗರಿಗೆ ಕಟ್ಟಡದ ಪಾರಂಪರಿಕ, ಇತಿಹಾಸ ಹಾಗೂ ಮಹತ್ವವನ್ನು ತಿಳಿಸುವ ಮೂಲಕ ಕಟ್ಟಡದ ಆಕರ್ಷಣೆಯನ್ನು ಮತ್ತಷ್ಟು ಹೆಚ್ಚಿಸುವ ದೃಷ್ಟಿಯಿಂದ ದೆಹಲಿಯ ರಾಷ್ಟ್ರಪತಿ ಭವನ, ಪಾರ್ಲಿಮೆಂಟ್ ಕಟ್ಟಡಗಳಿಗೆ ಏರ್ಪಡಿಸಿರುವಂತೆ ವಿಧಾನಸೌಧಕ್ಕೂ ಸಹ “ಗೈಡೆಡ್ ಟೂರ್” ಏರ್ಪಡಿಸಿದಲ್ಲಿ ಪ್ರವಾಸಿಗರ ಗಮನ ಸೆಳೆಯಬಹುದಾಗಿದೆ.

ವಿಧಾನಸೌಧಕ್ಕೆ Guided Tour” ವ್ಯವಸ್ಥೆ ಕಲ್ಪಿಸಲು ಅನುಮತಿ ನೀಡುವಂತೆ ಪ್ರವಾಸೋದ್ಯಮ ಇಲಾಖೆಯು ಪ್ರಸ್ತಾಪನೆ ಸಲ್ಲಿಸಿದೆ. ವಿಧಾನಸೌಧ ಕಟ್ಟಡಕ್ಕೆ ಪ್ರಸ್ತುತ ಶಾಶ್ವತ ದೀಪಾಲಂಕಾರ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು, ಇದರಿಂದ, ಕಟ್ಟಡದ ಸೌಂದರ್ಯವು ಹೆಚ್ಚುವುದರ ಮೂಲಕ ಪ್ರವಾಸಿಗರನ್ನು ಇನ್ನೂ ಹೆಚ್ಚಿನ ಮಟ್ಟದಲ್ಲಿ ಸೆಳೆಯಬಹುದಾಗಿದೆ. ಈ ಹಿನ್ನೆಲೆಯಲ್ಲಿ, ವಿಧಾನಸೌಧ ಕಟ್ಟಡ ವೀಕ್ಷಿಸಲು ಅವಕಾಶ ನೀಡಿ “Guided Tour” ಏರ್ಪಡಿಸಿದಲ್ಲಿ ದೇಶೀಯ ಪ್ರವಾಸಿಗರನ್ನೇ ಅಲ್ಲದೆ, ವಿದೇಶಿಯ ಪ್ರವಾಸಿಗರ ಗಮನವನ್ನು ಸೆಳೆದು, ವಿಧಾನಸೌಧವನ್ನು ಇನ್ನೂ ಆಕರ್ಷಣೀಯ ಕೇಂದ್ರವನ್ನಾಗಿಸಬಹುದು.

ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಬೆಳಿಗ್ಗೆ 8.00 ರಿಂದ ಸಂಜೆ 6.00ರವರೆಗೆ ಪ್ರವೇಶ ನೀಡಲು ಆದೇಶಿಸಿದೆ. ವಿಧಾನಸೌಧ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರನ್ನು ತಲಾ 30 ರಂತೆ ತಂಡಗಳನ್ನಾಗಿ ವಿಭಜಿಸಿ, ವೀಕ್ಷಣೆಗೆ ಅವಕಾಶ ಕಲ್ಪಿಸುವುದು ಹಾಗೂ ಈ ಪ್ರತಿ ತಂಡಗಳ ಮೇಲ್ವಿಚಾರಣೆ ಮಾಡಲು ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ಅಧಿಕಾರಿಗಳನ್ನು ಕಡ್ಡಾಯವಾಗಿ ನೇಮಿಸಬೇಕು. ಪ್ರವಾಸಿಗರಿಗೆ ನಿಗದಿಪಡಿಸುವ ಪ್ರವೇಶ ದರವು ಜನಸ್ನೇಹಿಯಾಗಿರಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ.

ಉಪ ಪೊಲೀಸ್ ಆಯುಕ್ತರು, ವಿಧಾನಸೌಧ ಭದ್ರತೆ ಇವರು ಭದ್ರತೆಗೆ ಸಂಬಂಧಿಸಿದಂತೆ ನೀಡುವ ಸೂಚನೆಗಳನ್ನು ಪಾಲಿಸಲು ಬದ್ಧರಾಗಿರತಕ್ಕದ್ದು. ಪ್ರವಾಸಿಗರ ಅಧಿಕೃತ ಗುರುತಿನ ಚೀಟಿಯನ್ನು ಪರಿಶೀಲಿಸಿ, ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ತಿಳಿಸಲಾಗಿದೆ.

ವಿಧಾನಸೌಧ ಕಟ್ಟಡ, ಉದ್ಯಾನವನಗಳು, ಪ್ರತಿಮೆಗಳಿಗೆ ಯಾವುದೇ ಧಕ್ಕೆ ಉಂಟಾಗಬಾರದು. ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಬೇಕು. ವೀಕ್ಷಣೆಗೆ ಆಗಮಿಸುವ ಪ್ರವಾಸಿಗರ ಪರಿವೀಕ್ಷಣೆಯ ಕುರಿತು ರೂಟ್ ಮ್ಯಾಪ್ ಅನ್ನು ಲೋಕೋಪಯೋಗಿ ಇಲಾಖೆ, ವಿಧಾನಸೌಧ ಭದ್ರತಾ ವಿಭಾಗದೊಂದಿಗೆ ಸಮಾಲೋಚಿಸಿ ತಯಾರಿಸಿ ಕಡ್ಡಾಯವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅನುಮೋದನೆ ಪಡೆಯಬೇಕು ಎಂದು ಹೇಳಲಾಗಿದೆ. ಒಟ್ಟಿನಲ್ಲಿ ವಿಧಾನಸೌಧ ನೋಡುವುದಕ್ಕೂ ಹಣ ನೀಡಬೇಕಾಗಿರುವುದು ರಾಜ್ಯದ ಜನರ ದೌರ್ಭಾಗ್ಯ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment