Home ಕ್ರೈಂ ನ್ಯೂಸ್ ದಾವಣಗೆರೆಯಲ್ಲಿ ಸರ್ಕಾರಿ ಕೆಲಸ ಸಿಗದೇ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು ನೋವು ತಂದಿದೆ: ನಿಖಿಲ್ ಕುಮಾರಸ್ವಾಮಿ ಬೇಸರ
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ದಾವಣಗೆರೆಯಲ್ಲಿ ಸರ್ಕಾರಿ ಕೆಲಸ ಸಿಗದೇ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು ನೋವು ತಂದಿದೆ: ನಿಖಿಲ್ ಕುಮಾರಸ್ವಾಮಿ ಬೇಸರ

Share
Share

SUDDIKSHANA KANNADA NEWS/DAVANAGERE/DATE:10_12_2025

ಬೆಂಗಳೂರು: ಪದವಿ ಪೂರೈಸಿ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನೂ ಬರೆದರು ಸರ್ಕಾರಿ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಮನನೊಂದು ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಗುಡ್ಡದ ಲಿಂಗಣ್ಣನಹಳ್ಳಿಯ ಯುವಕ ಅಂಜಿನಪ್ಪ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ನನಗೆ ವೈಯಕ್ತಿಕವಾಗಿ ನೋವು ತಂದಿದೆ ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 2,84,881 ಸರ್ಕಾರಿ ಹಾಗೂ ಅರೆ ಸರ್ಕಾರಿ ಹುದ್ದೆಗಳು ಖಾಲಿ ಇದ್ದರು ಕೂಡ ಸರ್ಕಾರ ಮಾತ್ರ ಉದ್ಯೋಗಾಕಾಂಕ್ಷಿಗಳ ಕನಸುಗಳಿಗೆ ತಣ್ಣೀರು ಹಾಕುತ್ತಾ ಬಂದಿರುವುದು ನೋವಿನ ಸಂಗತಿ ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಹತ್ತಿಕ್ಕುವ ನಿಟ್ಟಿನಲ್ಲಿ 24,300 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಿದೆ ಎಂದು ಹೇಳಿ ಕೈ ತೊಳೆದುಕೊಂಡಿದ್ದಾರೆ.ಇದರಿಂದ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಈ ಕೂಡಲೇ ಸರ್ಕಾರದಲ್ಲಿ ಖಾಲಿ ಇರುವ 2.8 ಲಕ್ಷ ಸರ್ಕಾರಿ ಹಾಗೂ ಅರೆ ಸರ್ಕಾರಿ ಹುದ್ದೆಗಳ ನೇಮಕಾತಿಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ಪೂರ್ವಕವಾಗಿ ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ರಾಜ್ಯದ ಯುವಕರು ಧೃತಿಗೆಡದೆ ಆತ್ಮಹತ್ಯೆಯ ದಾರಿಯನ್ನು ಆಯ್ಕೆ ಮಾಡಿಕೊಳ್ಳಬೇಡಿ. ಆತ್ಮಹತ್ಯೆ ಮಾಡಿಕೊಂಡ ಅಂಜಿನಪ್ಪ ಅವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ, ಅವರ ಕುಟುಂಬದ ಸದಸ್ಯರಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *