ದಾವಣಗೆರೆ: 2022-23 ಹಾಗೂ 2023-24 ಮತ್ತು 2024-25ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೊಮೋ ತೇರ್ಗಡೆಯಾದ ಅಭ್ಯರ್ಥಿಗಳು ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯಲು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in) ಮೂಲಕ ಅಥವಾ ದಾವಣಗೆರೆ ಒನ್/ಗ್ರಾಮ ಒನ್/ಕರ್ನಾಟಕ ಒನ್/ಬಾಪೂಜಿ ಸೇವಾ ಕೇಂದ್ರಗಳಲ್ಲೂ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
READ ALSO THIS STORY: ಚಿನ್ನದ ಬೆಲೆ ಗಗನಕ್ಕೆೇರಿದ್ದರಿಂದ ಕಳ್ಳರಿಂದ ತಪ್ಪಿಸಿಕೊಳ್ಳಲು ಪೊಲೀಸರ ಈ ಸೂಚನೆಗಳ ಪಾಲಿಸಿದರೆ ಸಾಕು!
ಈಗಾಗಲೇ ಹಣ ಪಡೆಯುತ್ತಿರುವ ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರಸ್ತುತ ತ್ರೈ ಮಾಸಿಕವಾಗಿ ದಾಖಲಿಸುತ್ತಿರುವ ಸ್ವಯಂ ಘೋಷಣೆಯನ್ನು ಇನ್ನುಮುಂದೆ ಈ ಮೊದಲಿನಂತೆ ಮಾಸಿಕವಾಗಿ ಪ್ರತಿ ತಿಂಗಳ 25ನೇ ತಾರೀಕಿನೊಳಗೆ ಆನ್‌ಲೈನ್ ಮೂಲಕ ದಾಖಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಪಿ.ಬಿ. ರಸ್ತೆ, ದಾವಣಗೆರೆಯನ್ನು ಸಂಪರ್ಕಿಸದೆAದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ.ಡಿ. ತಿಳಿಸಿದ್ದಾರೆ.






