SUDDIKSHANA KANNADA NEWS/ DAVANAGERE/ DATE:09-01-2024
ದಾವಣಗೆರೆ: ಯುವನಿಧಿ ಯೋಜನೆಯಡಿ ನೋಂದಣಿಗಾಗಿ ಗೃಹ ಜ.10 ರಂದು ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 26ರಿಂದ ಚಾಲನೆ ನೀಡಲಾಗಿದೆ. ಈ ಯೋಜನೆಯಡಿ 2023ನೇ ವರ್ಷದಲ್ಲಿ ಪದವಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ 3000 ರೂಪಾಯಿ ಹಾಗೂ ಡಿಪ್ಲೊಮಾ ತೇರ್ಗಡೆಯಾದವರಿಗೆ 1500 ರೂಪಾಯಿ ನಿರುದ್ಯೋಗ ಭತ್ಯೆ ನೀಡಲಾಗುವುದು.
ಯುವನಿಧಿ ಯೋಜನೆಗೆ ನೋಂದಣಿಯನ್ನು ಸೇವಾಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್, ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮಾಡಬಹುದಾಗಿದೆ. ಈ ನೋಂದಣಿಗಾಗಿ ಜ.10 ರಂದು ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ನೋಂದಣಿ ಅಭಿಯಾನ ನಡೆಸಲಾಗುತ್ತಿದ್ದು, ಇಲ್ಲಿ ನಿರುದ್ಯೋಗಿಗಳು ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ.