SUDDIKSHANA KANNADA NEWS/ DAVANAGERE/ DATE:16-05-2024
ದಾವಣಗೆರೆ: ತಾಲೂಕಿನ ಒಬಜ್ಜಿಹಳ್ಳಿ ಗ್ರಾಮದ ಹೊರವಲಯದಲ್ಲಿ ಯುವಕನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ.
ನಗರದ ಬೂದಾಳ್ ರಸ್ತೆಯ ವಾಸಿ ಸಂದೀಪ್ (25) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಸಂದೀಪ್ ನನ್ನು ಮದ್ಯ ಸೇವನೆ ಮಾಡಲು ಕರೆದು ಆತನ ಸ್ನೇಹಿತರು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಲವು ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ.

ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಒಬಜ್ಜಿಹಳ್ಳಿ ಬಳಿ ಓರ್ವ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳ್ಕಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆರೋಪಿಗಳ ಪತ್ತೆಗೆ ತನಿಖಾಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಪ್ರಶಾಂತ್ ಸಿದ್ದನಗೌಡರ್, ಪಿಐ ಕಿರಣ್ ಕುಮಾರ ಉಪಸ್ಥಿತರಿದ್ದರು.