ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಾವಣಗೆರೆ, ನೆಹರು ಯುವ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಅಕ್ಟೋಬರ್ 15 ರಂದು ನಗರದ ದೃಶ್ಯ ಕಲಾ ಮಹಾವಿದ್ಯಾಲಯ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಆಯೋಜಿಸಲಾಗಿದೆ.
READ ALSO THIS STORY: ಅಡಿಕೆಗೆ ಬಂಪರ್ ಬೆಲೆ: ರೂ. 61,000 ಗಡಿ ದಾಟಿದ ಕ್ವಿಂಟಲ್ ಧಾರಣೆ, ಬೆಳೆಗಾರರಿಗೆ ಮಹತ್ವದ ಮಾಹಿತಿ!
ಭಾಗವಹಿಸಲು ಇಚ್ಚಿಸುವ ಸ್ಪರ್ಧಾಳುಗಳು ಅ.13 ಮತ್ತು 14 ರಂದು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ತಮ್ಮ ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರದೊಂದಿಗೆ ನಿಗಧಿತ ಅರ್ಜಿ ನಮೂನೆಯನ್ನು ಪಡೆದು ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಳ್ಳಬಹುದು. ಅಥವಾ ಅ.15 ರಂದು ದೃಶ್ಯ ಕಲಾ ಮಹಾವಿದ್ಯಾಲಯ, ಇಲ್ಲಿ ಬೆಳಿಗ್ಗೆ 9 ರಿಂದ 10.30 ರ ಒಳಗಾಗಿ ನೋಂದಣಿ ಮಾಡಿಕೊಳ್ಳಬಹುದು.
ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸುವ ಸ್ಪರ್ಧಾಳುಗಳು 15 ರಿಂದ 29 ವರ್ಷದೊಳಗಿನ ಯುವಕ, ಯುವತಿಯರು ಮಾತ್ರ ಭಾಗವಹಿಸಬಹುದು. ದಾವಣಗೆರೆ ಜಿಲ್ಲೆಯ ಎಲ್ಲಾ ಯುವಕ, ಯುವತಿಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಿಗಳ ಮಾತ್ರ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ದೂ.ಸಂ: 08192-237480 ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ತಿಳಿಸಿದ್ದಾರೆ.