SUDDIKSHANA KANNADA NEWS/ DAVANAGERE/ DATE:25_07_2025
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹ ಪದವೀಧರರು, ಸ್ನಾತಕೋತ್ತರ ಪದವೀಧರರು ಮತ್ತು ಡಿಪ್ಲೋಮಾ ಪದವೀಧರರು 2025-26ನೇ ಸಾಲಿನ ವಿಶೇಷ ನೋಂದಣಿ ಅಭಿಯಾನ ಎಲ್ಲಾ ಜಿಲ್ಲೆಗಳಲ್ಲಿಯೂ ಹಮ್ಮಿಕೊಳ್ಳಲಾಗಿದೆ.
ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಲು ಆಗಸ್ಟ್ 7ರವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಪದವೀಧರರಿಗೆ ರೂ.3000 ಮತ್ತು ಡಿಪ್ಲೋಮಾ ಪದವೀಧರರಿಗೆ ರೂ.1500 ನೀಡಲಾಗುತ್ತದೆ. 2023-24, 2024-25 ಮತ್ತು 2025-26 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‌ಲೈನ್ ಸೇವಾಸಿಂಧು ಪೋರ್ಟಲ್, ಕರ್ನಾಟಕ-1, ಗ್ರಾಮ -1 ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು.
READ ALSO THIS STORY: 610 ಕ್ರೆಡಿಟ್ ಸ್ಕೋರ್ ವೈಯಕ್ತಿಕ ಸಾಲ ಅನುಮೋದನೆಯ ಮೇಲೆ ಹೇಗೆ ಪರಿಣಾಮ ಬೀರುತ್ತೆ: ಸಾಲಗಾರರು ಏನು ತಿಳಿದುಕೊಳ್ಳಬೇಕು?
ಅರ್ಹತೆ:
- ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ/180 ದಿನಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಅಥವಾ ಸ್ವಯಂ ಉದ್ಯೋಗ ಹೊಂದಿಲ್ಲದವರಾಗಿರಬೇಕು.
- ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಅರ್ಹರು. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ, ಡಿಪ್ಲೋಮಾ ಅಧ್ಯಯನ ಮಾಡಿದವರು).
ಬೇಕಾದ ದಾಖಲೆಗಳು:
- ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಆಧಾರ್ ಸೀಡೆಡ್ ಬ್ಯಾಂಕ್ ಖಾತೆ ಸಂಖ್ಯೆ
- ಆಧಾರ್ ಜೋಡಣೆಗೊಂಡ ಮೊಬೈಲ್ ಸಂಖ್ಯೆ.
ಪ್ರತಿ ತಿಂಗಳು 25 ರೊಳಗಾಗಿ ಸ್ವಯಂ ದೃಢೀಕೃತ ನಿರುದ್ಯೋಗಿ ಪ್ರಮಾಣ ಪತ್ರವನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ. ನೋಂದಾಯಿಸಿಕೊಳ್ಳಲು ಸೇವಾ ಸಿಂಧು ವೆಬ್ ಪೋರ್ಟಲ್ ವಿಳಾಸ: https://sevasindhugs.karnataka.gov.in ಗೆ ಭೇಟಿ
ನೀಡಬೇಕು.
ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಳ್ಳಲು ಯಾವುದೇ ಸಮಸ್ಯೆಗಳಾದಲ್ಲಿ ಸಹಾಯವಾಣಿ ಸಂಖ್ಯೆ ದೂ.18005999918, 18005997154 ಗೆ ಕರೆ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂಪರ್ಕಿಸಬಹುದು. ಸಂಬಂಧಿಸಿದ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯ ಫಲಾನುಭವಿಗಳ ನೋಂದಾಣಿಗೆ ಸನ್ಮಾನ್ಯ ಮುಖ್ಯಮಂತ್ರಿಗಳು ದಿನಾಂಕ:26-12-2023ರಂದು ಚಾಲನೆ ನೀಡಿದ್ದು, ನೋಂದಾಣಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಯೋಜನೆಯ ಅಡಿಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023ರಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಗಳು ಸೇರಿದಂತೆ ) ಪ್ರತಿ ತಿಂಗಳು ರೂ.3,000-00 ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1,500-00 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೀಡಲಾಗುತ್ತದೆ. ಸದರಿ ಅನ್ವಯವಾಗುವ ನಿರುದ್ಯೋಗ ಭತ್ಯೆಯನ್ನು ಫಲಾನುಭವಿಗಳ ಬ್ಯಾಮಕ್ ಖಾತೆಗಳಿಗೆ ಡಿ.ಬಿ.ಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ. ನಿರುದ್ಯೋಗ ಸ್ಥಿತಿಯ ಬಗ್ಗೆ ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.
ಪದವಿ/ಡಿಪ್ಲೋಮ ನಂತರ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಬ್ಯಾಸ ಮುಂದುವರೆಸುತ್ತಿರುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್ ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು ಹಾಗೂ ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷಗಳಿಗಿಂತ ಕಡಿಮೆ ವಾಸವಿಲ್ಲದಿರುವ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಾಗುವುದಿಲ್ಲ.
ಆಸಕ್ತ ಅಭ್ಯರ್ಥಿಗಳು www.sevasindhugs.karnataka.gov.in ನಲ್ಲಿ ನೋಂದಾಯಿಸಲು ಈ ಮೂಲಕ ತಿಳಿಸಲಾಗಿದೆ. ಪದವಿ/ಡಿಪ್ಲೋಮಾ ತೇರ್ಗಡೆಹೊಂದಿ 180 ದಿನಗಳೊಳಗೆ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆದರೆ ಈ ಅಭ್ಯರ್ಥಿಗಳು 180ದಿನಗಳ ನಂತರ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗುತ್ತಾರೆ. ಯೋಜನೆಯ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳ 1 ರಿಂದ 25ನೇ ತಾರೀಖಿನೊಳಗೆ ಘೋಷಣೆಯನ್ನು ಆನ್ ಲೈನ್ ನಲ್ಲಿ ಈ ಮೇಲೆ ತಿಳಿಸಲಾದ ಅಂತರ್ಜಾಲ ತಾಣದಿಂದ ಅಥವಾ ಸಹಾಯವಾಣಿ ಸಂಖ್ಯೆ:1800-599-9918 ಇಂದ ಪಡೆಯಲು ತಿಳಿಸಲಾಗಿದೆ.
ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆಯನ್ನು ಪಡೆಯಲು ಅರ್ಜಿ ಸಲ್ಲಿಸಿ, ದಾಖಲಾತಿಗಳ ಪರಿಶೀಲನೆಗಾಗಿ ಬಾಕಿ ಇರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿ ಅಥವಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿಗಳಿಗೆ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಬೇಟಿ ನೀಡಿ ಪರಿಶೀಲಿಸಿಕೊಳ್ಳಲು ಈ ಮೂಲಕ ತಿಳಿಸಲಾಗಿದೆ. ಅರ್ಜಿದಾರರ ಅರ್ಜಿಗಳು ಪರಿಶೀಲನೆಗೆ ಬಾಕಿ ಇರುವ ಸ್ಥಿತಿಯನ್ನು ಸೇವಾ ಸಿಂಧೂ ಅಂತರ್ಜಾಲ ತಾಣದಿಂದ ಪಡೆಯಬಹುದಾಗಿರುತ್ತದೆ.