SUDDIKSHANA KANNADA NEWS/ DAVANAGERE/ DATE:22-03-2025
ಬೆಂಗಳೂರು: ಹವಾಮಾನ ವೈಪರೀತ್ಯ, ಅನಿಶ್ಚಿತ ಫಸಲು ಹಾಗೂ ರೋಗರುಜಿನಗಳಿಂದ ತತ್ತರಿಸಿಹೋಗಿರುವ ಕೃಷಿ ಕ್ಷೇತ್ರದಲ್ಲಿ ಮತ್ತೆ ಉತ್ಸಾಹವನ್ನು ಕಾಣಲು ನಮ್ಮ ಸರ್ಕಾರ ಟೊಂಕ ಕಟ್ಟಿ ನಿಂತಿದೆ.
ಅನ್ನದಾತರ ಕೈಗಳಿಗೆ ಹಣ ನೀಡಿ ಅದನ್ನು ಕೃಷಿಯಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸಿ, ಆ ಮೂಲಕ ನಾಡಿನ ಆರ್ಥಿಕತೆಗೆ ಬಲತುಂಬುವುದು ನಮ್ಮ ಸರ್ಕಾರದ ಆಶಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
5 ಲಕ್ಷ ರೂ.ಗಳವರೆಗೆ ಶೂನ್ಯ ಬಡ್ಡಿ ರೂಪದಲ್ಲಿ ನೀಡಲಾಗುವ ಸಾಲವನ್ನು ಸಹಕಾರಿ ಕೃಷಿ ಬ್ಯಾಂಕ್ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ಗಳಿಗೆ ವಿಸ್ತರಿಸಲಾಗಿದೆ. ಇದಕ್ಕಾಗಿ ಹೆಚ್ಚುವರಿಯಾಗಿ 38 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ಹೇಳಿದ್ದಾರೆ.
ರೈತರ ಕಾಳಜಿ ಎನ್ನುವುದು ನಮ್ಮ ಭಾಷಣದ ಸರಕಲ್ಲ, ಆಡಳಿತದ ಕೇಂದ್ರಬಿಂದು ಎಂಬುದನ್ನು ಮತ್ತೆ ಸಾಬೀತು ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.